ಕಿರಣ್ ರಾಜ್ ಮನವಿಯನ್ನು ಸ್ವೀಕರಿಸುತ್ತಾರಾ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ, ಅಷ್ಟಕ್ಕೂ ಅವರು ಬರೆದಿರುವ ಪತ್ರದಲ್ಲಿ ಏನಿತ್ತು ಗೊತ್ತೇ ??
ಸ್ನೇಹಿತರೆ, ಕೋವಿಡ್ ಭೀತಿಯಿಂದ ಶಾಲಾ-ಕಾಲೇಜುಗಳು ಮುಚ್ಚಿವೆ ಪರ್ಯಾಯವಾಗಿ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ. ಆದರೆ ಪ್ರವೇಶ ಶುಲ್ಕದಲ್ಲಿ ಯಾವುದೇ ರೀತಿಯಾದಂತಹ ರಿಯಾಯಿತಿಗಳು ಸಿಗದಿರುವುದು ಪೋಷಕರ ವಿರೋಧಕ್ಕೆ ಕಾರಣವಾಗಿದೆ. ಮೊದಲೇ ಲಾಕ್ಡೌನ್ ಜಾರಿಯಲ್ಲಿದೆ ಕೆಲಸ ಬೇರೆ ಇಲ್ಲ, ಸಂಬಳ ಎಲ್ಲಿಂದ ಬರಬೇಕು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂದು ಆನ್ಲೈನ್ ಶಿಕ್ಷಣಕ್ಕೆ ಹೊಂದಿಕೊಂಡಿರುವ ಪೋಷಕರು ಪೂರ್ತಿ ಶುಲ್ಕ ಪಾವತಿಸಲು ಕಷ್ಟಪಡುತ್ತಿದ್ದಾರೆ. ಈ ನಡುವೆ ಪೂರ್ತಿ ಶುಲ್ಕವನ್ನು ಪಾವತಿಸುವಂತೆ ಶಿಕ್ಷಣ ಸಂಸ್ಥೆಗಳು ಪೋಷಕರ ಮೇಲೆ ಒತ್ತಡ ಹೇರುತ್ತಿವೆ. ಇದನ್ನು ಖಂಡಿಸಿ ಪೋಷಕರು ಬೀದಿಗಿಳಿದು ಹೋರಾಟ ಮಾಡಿದ್ದರೂ ಕೂಡ ಯಾವುದೇ ಪ್ರಯೋಜನವಾಗಲಿಲ್ಲ.
ಈಗ ಕನ್ನಡದ ನಟ ಕಿರಣ್ ರಾಜ್ ವಿದ್ಯಾರ್ಥಿಗಳು ಹಾಗೂ ಪೋಷಕರ ಪರವಾಗಿ ಧ್ವನಿ ಎತ್ತಿದ್ದಾರೆ. ಕರೋನದ ಬಿಕ್ಕಟ್ಟಿನಲ್ಲಿ ಪೂರ್ತಿ ಶುಲ್ಕ ಪಾವತಿಸುವುದು ಕಷ್ಟಕರ ಹಾಗಾಗಿ ಸರ್ಕಾರ ಈ ಕುರಿತು ಚರ್ಚಿಸಿ ಸ್ವಲ್ಪ ಕಡಿಮೆ ಮಾಡುವಂತೆ ಕ್ರಮ ಜರುಗಿಸಬೇಕು ಎಂದು ನಟ ಕಿರಣ್ ರಾಜ್ ಸಿಎಂ ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದರು.
ಈ ಕುರಿತು ಯಡಿಯೂರಪ್ಪ ಅವರು ಯಾವ ಕ್ರಮವನ್ನು ತೆಗೆದುಕೊಳ್ಳಬಹುದು ಎಂದು ತಿಳಿದುಕೊಳ್ಳಬೇಕಾದರೆ ಇದನ್ನು ಸಂಪೂರ್ಣವಾಗಿ ಓದಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಕಿರಣ್ ರಾಜ್ ಮುಖ್ಯಮಂತ್ರಿಗಳಿಗೆ ಬರೆದಂತಹ ಪತ್ರ ಈ ರೀತಿ ಇತ್ತು, ಜಗತ್ತಿನೆಲ್ಲೆಡೆ ವ್ಯಾಪಕವಾಗಿ ಕೋವಿಡ್ 19 ಹರಡಿ ಸಾಮಾನ್ಯ ಜನರ ಬದುಕು ಅಲ್ಲೋಲಕಲ್ಲೋಲವಾಗಿದೆ.
ಇನ್ನು ಮಕ್ಕಳು ಶಾಲಾ-ಕಾಲೇಜು ಇಲ್ಲದೆ ಆನ್ಲೈನ್ ಶಿಕ್ಷಣಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ಇಂತಹ ಸಮಯದಲ್ಲಿ ಶಾಲಾ-ಕಾಲೇಜುಗಳ ಶುಲ್ಕವು ಸ್ವಲ್ಪವೂ ಕುಗ್ಗಿಲ್ಲ. ಹೀಗಾಗಿ ದಯವಿಟ್ಟು ಶಾಲಾ-ಕಾಲೇಜುಗಳ ಶುಲ್ಕದಲ್ಲಿ ರಿಯಾಯಿತಿ ಕೊಡಬೇಕೆಂದು ಈ ಮೂಲಕ ನಿಮ್ಮಲ್ಲಿ ಎಲ್ಲ ಪೋಷಕರ ಪರವಾಗಿ ವಿನಂತಿಸಿಕೊಳ್ಳುತ್ತಿದ್ದೇವೆ. ನಮ್ಮ ವಿನಂತಿಯನ್ನು ನೀವು ಪರಿಗಣಿಸಿ ಪರಿಶೀಲಿಸಿ ಜನರ ಬೆನ್ನೆಲುಬಾಗಿ ನಿಲ್ಲುವಿರೆಂಬ ವಿಶ್ವಾಸವಿದೆ. ಕರೋನಾ ಬಿಕ್ಕಟ್ಟಿನ ಸಮಯದಲ್ಲಿ ಕಿರಣ್ ರಾಜ್ ತಮ್ಮ ಫೌಂಡೇಶನ್ ಮೂಲಕ ಕಷ್ಟದಲ್ಲಿ ಇರುವಂತಹ ಬಡಜನರಿಗೆ ಸಹಾಯ ಮಾಡುತ್ತಿದ್ದಾರೆ.
ಬೆಂಗಳೂರು ನಗರದ ಹಲವಾರು ಕಡೆ ಪ್ರತಿನಿತ್ಯ ಆಹಾರದ ವ್ಯವಸ್ಥೆ ಮಾಡುತ್ತಿದ್ದಾರೆ, ಇನ್ನು ಪೋಷಕರ ಮತ್ತು ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ್ದು, ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಯಾದ ಯಡಿಯೂರಪ್ಪನವರು ಯಾವ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಕಿರಣ್ ರಾಜ್ ಅವರ ಇಂತಹ ಉತ್ತಮ ಕೆಲಸಗಳ ಬಗ್ಗೆ ನಿಮ್ಮ ಅನಿಸಿಕೆ ಏನು ಎಂಬುದನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಿ…