ಕನ್ನಡಿಗರ ಅಚ್ಚು ಮೆಚ್ಚಿನ ನಟಿಯರಲ್ಲಿ ಒಬ್ಬರಾದ ನಟಿ ಶ್ವೇತಾ ಶ್ರೀವಾತ್ಸವ್ ಪ್ರೇಮಿಗಳ ದಿನವನ್ನು ಸೆಲೆಬ್ರೇಟ್ ಮಾಡಿದ್ದೆಗೆ ಗೊತ್ತೇ??
ನಮಸ್ಕಾರ ಸ್ನೇಹಿತರೇ ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡಿರುವಂತಹ ಕಡಿಮೆ ಬಜೆಟ್ಟಿನ ಒಳ್ಳೆ ಕಂಟೆಂಟ್ ಸಿನಿಮಾ ಎಂದರೆ ಅದು ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ. ಇದೇ ಚಿತ್ರ ರಕ್ಷಿತ್ ಶೆಟ್ಟಿ ಹಾಗೂ ಸಿಂಪಲ್ ಸುನಿ ರವರಿಗೆ ಕನ್ನಡ ಚಿತ್ರರಂಗದಲ್ಲಿ ಒಂದೊಳ್ಳೆ ಅವಕಾಶವನ್ನು ಪಡೆಯುವತ್ತ ಭದ್ರ ಬುನಾದಿಯನ್ನು ಹಾಕಿಕೊಟ್ಟಿತ್ತು.

ಈ ಚಿತ್ರದ ಮೂಲಕವೇ ಕನ್ನಡ ಚಿತ್ರರಂಗಕ್ಕೆ ಶ್ವೇತಾ ಶ್ರೀವಾತ್ಸವ್ ಅವರಂತಹ ನಾಯಕ ನಟಿಯು ಕೂಡ ಸಿಕ್ಕಿದ್ದರು. ಇನ್ನು ಹಲವಾರು ಸಿನಿಮಾಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಸಕ್ಕತ್ ಸಿಂಪಲ್ ಆಗಿರುವ ಶ್ವೇತಾ ಶ್ರೀವಾತ್ಸವ್ ರವರು ಮದುವೆಯಾದ ನಂತರ ಹೆಚ್ಚಿನ ಸಮಯವನ್ನು ಕುಟುಂಬದೊಂದಿಗೆ ಕಳೆಯುತ್ತಿದ್ದಾರೆ. ಇನ್ನು ಇವರಿಗೆ ಅಶ್ಮಿತ ಎನ್ನುವ ಹೆಣ್ಣು ಮಗಳು ಕೂಡ ಇದ್ದು ಅವಳು ಕೂಡ ಈಗ ತಾಯಿಯಂತೆ ಸೋಶಿಯಲ್ ಮೀಡಿಯಾದಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಸೆಲೆಬ್ರಿಟಿ ಆಗಿದ್ದಾಳೆ. ಪ್ರತಿಯೊಂದು ಹಬ್ಬದ ಸಂದರ್ಭಗಳಲ್ಲಿ ಶ್ವೇತಾ ಶ್ರೀವಾತ್ಸವ್ ತಮ್ಮ ಮಗಳಿಗೆ ಆಗಾಗ ಹಬ್ಬಕ್ಕೆ ತಕ್ಕಂತೆ ಫೋಟೋ ಶೂಟ್ ಮಾಡಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ.
ಉದಾಹರಣೆಗೆ ಇತ್ತೀಚಿಗಷ್ಟೇ ನಡೆದಿರುವ ಶ್ರೀಕೃಷ್ಣಜನ್ಮಾಷ್ಟಮಿ ಹಬ್ಬದ ಸಂದರ್ಭದಲ್ಲಿ ಇಬ್ಬರು ಕೂಡ ಯಶೋದೆ ಹಾಗೂ ಕೃಷ್ಣನ ರೀತಿ ವೇಷಭೂಷಣವನ್ನು ಧರಿಸಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಇನ್ನು ಈ ಬಾರಿ ವ್ಯಾಲೆಂಟೈನ್ಸ್ ಡೇ ಕೂಡ ನಡೆದಿದ್ದು ಈ ಬಾರಿ ಕೂಡ ಶ್ವೇತಾ ಶ್ರೀವಾತ್ಸವ್ ತಮ್ಮ ಮಗಳೊಂದಿಗೆ ವಿಶೇಷ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ ಎಂದು ಹೇಳಬಹುದಾಗಿದೆ. ಹೌದು ಈ ಬಾರಿ ಸ್ವಿಮ್ಮಿಂಗ್ ಪೂಲ್ ನಲ್ಲಿ ಶ್ವೇತಾ ಶ್ರೀವಾತ್ಸವ್ ತಮ್ಮ ಮಗಳಾಗಿರುವ ಆಶ್ಮಿತಾ ಹಾಗೂ ತಮ್ಮ ಗಂಡನೊಂದಿಗೆ ವಿಶೇಷ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡು ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಈಗಾಗಲೇ ಇದು ವ್ಯಾಪಕ ಮೆಚ್ಚುಗೆಗೆ ಕಾರಣವಾಗಿದೆ. ಈ ಫೋಟೋಗಳು ಕುರಿತಂತೆ ನಿಮ್ಮ ಅನಿಸಿಕೆಯನ್ನು ತಪ್ಪದೆ ನಮ್ಮೊಂದಿಗೆ ಹಂಚಿಕೊಳ್ಳಿ.