ಗೃಹಿಣಿಯರಿಗೆ ಸುವರ್ಣಾವಕಾಶ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಿ ಸರ್ಕಾರೀ ಉದ್ಯೋಗ ಪಡೆಯಿರಿ. ಹೇಗೆ ಗೊತ್ತೇ??
ನಮಸ್ಕಾರ ಸ್ನೇಹಿತರೇ, ಕರ್ನಾಟಕದಲ್ಲಿ ಈಗಾಗಲೇ ಹಲವು ಕಡೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ ತರಗತಿ ಹಾಗೂ ನಾಲ್ಕನೇ ತರಗತಿ ತೇರ್ಗಡೆ ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಚಿಕ್ಕಮಗಳೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ-22 ಹುದ್ದೆಗಳು ಹಾಗೂ ಅಂಗನವಾಡಿ ಸಹಾಯಕಿ- 59 ಹುದ್ದೆಗಳು ಒಟ್ಟು 81 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಎಸ್ಎಲ್ಸಿ, ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು 4ನೇ ತರಗತಿ, 9ನೇ ತರಗತಿ ಪಾಸಾಗಿರಬೇಕು.

ಇನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರ ಬೇಕು. ಆದರೆ ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಇನ್ನು ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ಫೆಬ್ರವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಜ್ 17 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ anganwadirecruit.kar.nic.in ಗೆ ಭೇಟಿ ನೀಡಿ.