ಇದುವರೆಗೂ ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಬಾಕ್ಸಾಫೀಸ್ ಕಲೆಕ್ಷನ್ ಮಾಡಿರುವ ಟಾಪ್ 6 ಸಿನಿಮಾಗಳು ಯಾವುವು ಗೊತ್ತಾ?? ಅಪ್ಪು ಸಿನಿಮಾಗಳು ಎಷ್ಟಿವೆ ಗೊತ್ತೇ?

28

ನಮಸ್ಕಾರ ಸ್ನೇಹಿತರೇ ನಮ್ಮ ಕನ್ನಡ ಚಿತ್ರರಂಗ ಎನ್ನುವುದು ಇತ್ತೀಚಿನ ಕೆಲವು ವರ್ಷಗಳಿಂದ ದೊಡ್ಡಮಟ್ಟದ ಬದಲಾವಣೆಗೆ ತನ್ನನ್ನು ತಾನು ಅರ್ಪಿಸಿಕೊಂಡಿದೆ ಇದು ಕನ್ನಡ ಚಿತ್ರರಂಗಕ್ಕೆ ಲಾಭದಾಯಕವಾಗಿ ಪರಿಣಮಿಸಿದೆ ಎಂದರೆ ತಪ್ಪಾಗಲಾರದು. ಇನ್ನು ಇಂದಿನ ಲೇಖನಿಯಲ್ಲಿ ನಾವು ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಹೆಚ್ಚು ಬಾಕ್ಸಾಫೀಸ್ ಕಲೆಕ್ಷನ್ ಮಾಡಿರುವ ಟಾಪ್ 6 ಸಿನಿಮಾಗಳ ಕುರಿತು ನಿಮಗೆ ವಿವರಿಸಲು ಹೊರಟಿದ್ದೇವೆ.

ಮೊದಲಿಗೆ 6ನೇ ಸ್ಥಾನದಲ್ಲಿ ರಾಜಕುಮಾರ; ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಪ್ರಿಯಾ ಆನಂದ್ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಈ ಚಿತ್ರವನ್ನು ನಿರ್ದೇಶಿಸಿರುವುದು ಸಂತೋಷ ಆನಂದ್ ರಾಮ್. ಸಿನಿಮಾದ ನಿರ್ಮಾಣ ಮಾಡಿರುವುದು ಹೊಂಬಾಳೆ ಫಿಲಂಸ್ ನಿರ್ಮಾಣ ಸಂಸ್ಥೆ. ಈ ಚಿತ್ರವನ್ನು ಫ್ಯಾಮಿಲಿ ಆಡಿಯನ್ಸ್ ಮೂರನೇ ದಿನವೂ ಕೂಡ ಹೌಸ್ಫುಲ್ ಚಿತ್ರಮಂದಿರಗಳಲ್ಲಿ ನೋಡಿರುವಂತಹ ಸಿನಿಮಾ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬಹುದಾಗಿದೆ. ಇನ್ನು ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಗಳಿಸಿರುವುದು ಬರೋಬ್ಬರಿ 75 ಕೋಟಿ ರೂಪಾಯಿಗಳನ್ನು.

ಐದನೇ ಸ್ಥಾನದಲ್ಲಿ ಕುರುಕ್ಷೇತ್ರ; ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕುರುಕ್ಷೇತ್ರ ಸಿನಿಮಾದಲ್ಲಿ ಸೋನು ಸೂದ್ ಅರ್ಜುನ್ ಸರ್ಜಾ ನಿಖಿಲ್ ಕುಮಾರ್ ರೆಬೆಲ್ ಸ್ಟಾರ್ ಅಂಬರೀಶ್ ಶಶಿಕುಮಾರ್ ಕ್ರೇಜಿಸ್ಟಾರ್ ರವಿಚಂದ್ರನ್ ಸೇರಿದಂತೆ ಸ್ಟಾರ್ ನಟರ ದಂಡೇ ಇತ್ತು. ಮಹಾಭಾರತದ ಪೌರಾಣಿಕ ಕಥಾನಕವನ್ನು ಒಳಗೊಂಡಿರುವಂತಹ ಕುರುಕ್ಷೇತ್ರ ಸಿನಿಮಾ ಬಾಕ್ಸಾಫೀಸ್ ನಲ್ಲಿ ಬರೋಬ್ಬರಿ 90 ಕೋಟಿ ರೂಪಾಯಿ ಗಳಿಸಿದೆ.

ನಾಲ್ಕನೇ ಸ್ಥಾನದಲ್ಲಿ ರಾಬರ್ಟ್; ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯಲ್ಲಿ ತರುಣ್ ಸುಧೀರ್ ನಿರ್ದೇಶನದಲ್ಲಿ ಹಾಗೂ ಉಮಾಪತಿ ಶ್ರೀನಿವಾಸಗೌಡ ನಿರ್ಮಾಣದಲ್ಲಿ ಮೂಡಿ ಬಂದಿರುವ ಈ ಚಿತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ 2 ಶೇಡ್ ಪಾತ್ರದ ಕಾರಣದಿಂದಾಗಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಬಾಕ್ಸಾಫೀಸ್ ನಲ್ಲಿ ರಾಬರ್ಟ್ ಚಿತ್ರ ಬರೋಬ್ಬರಿ 102 ಕೋಟಿ ರೂಪಾಯಿಗಳನ್ನು ಗಳಿಸಿದೆ.

ಮೂರನೇ ಸ್ಥಾನದಲ್ಲಿ ಜೇಮ್ಸ್; ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮರಣದ ನಂತರ ಅವರ ಕೊನೆಯ ಸಿನಿಮಾ ವಾಗಿರುವ ಜೇಮ್ಸ್ ಚಿತ್ರ ಮಾರ್ಚ್ 17ರಂದು ಬಿಡುಗಡೆಯಾಗಿತ್ತು. ಈಗಲೂ ಕೂಡ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನವನ್ನು ಕಾಣುತ್ತಿರುವ ಜೇಮ್ಸ್ ಚಿತ್ರ ಈಗಾಗಲೇ 150.7 ಕೋಟಿ ರೂಪಾಯಿಗಳನ್ನು ಗಳಿಸಿದೆ. ಇದು ಕೇವಲ ಅಪ್ಪು ಅಭಿಮಾನಿಗಳಿಗೆ ಮಾತ್ರವಲ್ಲದೆ ಪ್ರತಿಯೊಬ್ಬ ಸಿನಿಮಾ ಅಭಿಮಾನಿಗಳಿಗೂ ಕೂಡ ಭಾವನಾತ್ಮಕ ಸಿನಿಮಾವಾಗಿದೆ ಎಂದರೆ ತಪ್ಪಾಗಲಾರದು.

ಎರಡನೇ ಸ್ಥಾನದಲ್ಲಿ ಕೆಜಿಎಫ್ ಚಾಪ್ಟರ್ 1; ಕನ್ನಡ ಚಿತ್ರರಂಗದ ಅದೃಷ್ಟ ಹಾಗೂ ದಿಕ್ಕನ್ನೇ ಬದಲಾಯಿಸಿದ ಚಿತ್ರವೆಂದರೆ ಅದು ರಾಕಿಂಗ್ ಸ್ಟಾರ್ ಯಶ್ ನಟನೆಯ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಕೆಜಿಎಫ್ ಚಾಪ್ಟರ್ 1. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗದ ಮಾರುಕಟ್ಟೆಗೆ ಪರಭಾಷೆಗಳಲ್ಲಿ ಕೂಡ ಬೇಡಿಕೆ ಹೆಚ್ಚಾಗಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಮೂಡಿ ಬಂದಿರುವ ಕೆಜಿಎಫ್ ಚಾಪ್ಟರ್ 1 ಬರೋಬ್ಬರಿ 250 ಕೋಟಿಗೂ ಅಧಿಕ ಬಾಕ್ಸಾಫೀಸ್ ಕಲೆಕ್ಷನ್ ಮಾಡಿದೆ.

ಮೊದಲನೇ ಸ್ಥಾನದಲ್ಲಿ ಕೆಜಿಎಫ್ ಚಾಪ್ಟರ್ 2; ಈಗಾಗಲೇ ನಿಮಗೆಲ್ಲ ತಿಳಿದಿರುವಂತೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಕೆಜಿಎಫ್ ಚಾಪ್ಟರ್ 2 ಚಿತ್ರ ಇದೇ ಏಪ್ರಿಲ್ 14ರಂದು ಬಿಡುಗಡೆಯಾಗಿ ಭಾರತೀಯ ಚಿತ್ರರಂಗದ ಪ್ರತಿಯೊಂದು ದಾಖಲೆಗಳನ್ನು ಕೂಡ ಒಂದೊಂದಾಗಿ ಮುರಿದು ಬರುತ್ತಿದೆ. ಈಗಾಗಲೇ ಎಂಟು ದಿನಗಳಲ್ಲಿ 750 ಕೋಟಿಗೂ ಅಧಿಕ ಬಾಕ್ಸಾಫೀಸ್ ಕಲೆಕ್ಷನ್ ಮಾಡಿದೆ. ಮುಂದಿನ ದಿನಗಳಲ್ಲಿ ಸಾವಿರ ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಸಾಧ್ಯತೆ ನಿಚ್ಚಳವಾಗಿದೆ. ಇವುಗಳನ್ನು ನಿಮ್ಮ ನೆಚ್ಚಿನ ಸಿನಿಮಾ ಯಾವುದು ಎನ್ನುವುದರ ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ.