ಗುಜರಾತ್ ವಿರುದ್ಧ ಅರ್ಧ ಶತಕ ಬಾರಿಸಿದ ವಿರಾಟ್ ಕೊಹ್ಲಿ ಅವರ ಬಗ್ಗೆ ಕ್ಯಾಪ್ಟನ್ ಡುಪ್ಲೆಸಿಸ್ ಹೇಳಿದ್ದೇನು ಗೊತ್ತಾ??

19

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋತು ಪಾಯಿಂಟ್ಸ್ ಟೇಬಲ್ ನಲ್ಲಿ ಐದನೇ ಸ್ಥಾನದಲ್ಲಿದೆ. ನಿಜಕ್ಕೂ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ್ಫಾರ್ಮೆನ್ಸ್ ನೋಡಿದರೆ ಅಭಿಮಾನಿಗಳಿಗೆ ದುಃಖವಾಗುತ್ತಿದೆ ಎಂದರೆ ತಪ್ಪಾಗಲಾರದು. ಈ ಬಾರಿಯ ಐಪಿಎಲ್ ನ ಮೊದಲಾರ್ಧದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತವಾಗಿ ಗೆಲುವನ್ನು ಪಡೆಯುವ ಮೂಲಕ ಅಭಿಮಾನಿಗಳ ಮುಖದಲ್ಲಿ ಮಂದಹಾಸ ಮೂಡಿಸಿತ್ತು.

ಆದರೆ ದ್ವಿತೀಯಾರ್ಧದಲ್ಲಿ ಆಡಿರುವ ಎಲ್ಲಾ ಪಂದ್ಯಗಳಲ್ಲಿ ಕೂಡ ಸೋಲನ್ನು ಕಂಡು ಈಗಾಗಲೇ ಪ್ಲೇಆಫ್ ಹಂತಕ್ಕೆ ತೇರ್ಗಡೆ ಆಗುವ ಕನಸನ್ನು ಬಿಡುವ ಹಂತದಲ್ಲಿ ಸಾಗುತ್ತಿದೆ ಎಂದು ಹೇಳಬಹುದಾಗಿದೆ. ಆದರೆ ಕಳೆದ ಗುಜರಾತ್ ವಿರುದ್ಧ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋತರು ಕೂಡ ತಂಡದ ಪ್ರಮುಖ ಬ್ಯಾಟ್ಸ್ಮನ್ ಆಗಿರುವ ವಿರಾಟ್ ಕೊಹ್ಲಿ ಅವರು ಫಾರ್ಮಿಗೆ ಬಂದಿದ್ದು ನಿಜಕ್ಕೂ ಕೂಡ ಅಭಿಮಾನಿಗಳಿಗೆ ಸಂತಸವನ್ನು ತಂದಿತ್ತು.

ಹೌದು ಗೆಳೆಯರೇ ಹಲವಾರು ಸಮಯಗಳಿಂದ ಕಳಪೆ ಫಾರ್ಮ್ ನಲ್ಲಿ ಇದ್ದ ವಿರಾಟ್ ಕೊಹ್ಲಿ ರವರು ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಫಿಫ್ಟಿ ಬಾರಿಸಿದ್ದು ನಿಜಕ್ಕೂ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಳತೆಯನ್ನು ಮೂಡಿಸಿತ್ತು. ಈ ಕುರಿತಂತೆ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿರುವ ಡುಪ್ಲೆಸಿಸ್ ರವರು ಏನು ಹೇಳಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಹೌದು ಗೆಳೆಯರೇ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಅರ್ಧ ಶತಕ ಬಾರಿಸಿರುವ ವಿರಾಟ್ ಕೊಹ್ಲಿ ಅವರನ್ನು ನೆನೆಸಿಕೊಂಡು ಅರ್ಧಶತಕವನ್ನು ಬಾರಿಸುವ ಮೂಲಕ ವಿರಾಟ್ ಕೊಹ್ಲಿ ರವರು ಮತ್ತೊಮ್ಮೆ ಫಾರ್ಮ್ ಗೆ ಕಂಬ್ಯಾಕ್ ಮಾಡಿದ್ದಾರೆ. ಉಳಿದಿರುವ ನಾಲ್ಕು ಪಂದ್ಯಗಳನ್ನು ಖಂಡಿತವಾಗಿ ನಾವು ಗೆದ್ದೇಗೆಲ್ಲುತ್ತೇವೆ ಇದರಲ್ಲಿ ಕೂಡ ವಿರಾಟ್ ಕೊಹ್ಲಿ ರವರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ನೀವು ನೋಡಲು ಮತ್ತೆ ಸಾಧ್ಯವಿದೆ ಎಂಬುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ.