ಸೀರೇಲಿ ಹುಡುಗಿಯನ್ನು ನೋಡಬಾರದು ಎನ್ನುವ ರಚಿತಾ ರಾಮ್, ಸೀರೆಯಲ್ಲಿ ಸ್ಟೇಜ್ ಮೇಲೆ ಮಾಡಿದ ಡಾನ್ಸ್ ಹೇಗಿತ್ತು ಗೊತ್ತೇ?? ಈಗೂ ಡಾನ್ಸ್ ಮಾಡ್ತಾರಾ ರಚಿತಾ??
ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡ ಚಿತ್ರರಂಗದ ಸದ್ಯದ ಮಟ್ಟಿಗೆ ಅತ್ಯಂತ ಬಹುಬೇಡಿಕೆ ಹಾಗು ಎಲ್ಲರಿಗಿಂತ ಹೆಚ್ಚು ಸಂಭಾವನೆ ಪಡೆಯುವ ನಟಿಯೆಂದರೆ ಅದು ಡಿಂಪಲ್ ಕ್ವೀನ್ ರಚಿತಾ ರಾಮ್ ರವರು ಎಂದು ಹೇಳಬಹುದಾಗಿದೆ. ಡಿಂಪಲ್ ಕ್ವೀನ್ ರಚಿತಾ ರಾಮ್ ರವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬುಲ್ ಬುಲ್ ಚಿತ್ರದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟವರು ಮತ್ತೆ ಹಿಂದಿರುಗಿ ನೋಡಿದ್ದೇ ಇಲ್ಲ. ಒಂದು ಲೆಕ್ಕದಲ್ಲಿ ಹೇಳುವುದಾದರೆ ಕನ್ನಡ ಚಿತ್ರರಂಗದ ಎಲ್ಲಾ ಸ್ಟಾರ್ ನಟರ ಜೊತೆಗೆ ನಟಿಸಿರುವ ಯಾರಾದರೂ ಸ್ಟಾರ್ ನಟಿ ಇದ್ದಾರೆ ಎಂದು ಖಂಡಿತವಾಗಿ ರಚಿತರಾಮ ಎಂದರೆ ತಪ್ಪಾಗಲಾರದು.
ರಚಿತಾರಾಮ್ ರವರು ಹಲವಾರು ಅವಕಾಶಗಳಿದ್ದರೂ ಕೂಡ ಬೇರೆ ಭಾಷೆಗಳಿಗೆ ಮಣೆ ಹಾಕದೆ ಕನ್ನಡ ಚಿತ್ರರಂಗದ ನಟಿಯಾಗಿ ಉಳಿದುಕೊಂಡಿದ್ದಾರೆ. ಇನ್ನು ಕೇವಲ ಸಿನಿಮಾದ ಮೂಲಕ ಮಾತ್ರವಲ್ಲದೆ ಸೋಶಿಯಲ್ ಮೀಡಿಯಾ ಗಳಲ್ಲಿ ಕೂಡ ಮಿಲಿಯನ್ ಗಟ್ಟಲೆ ಅಭಿಮಾನಿಗಳನ್ನು ಹೊಂದಿದ್ದಾರೆ. ಸದ್ಯದ ವಿಚಾರವನ್ನು ಹೇಳುವುದಾದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಜೊತೆಗೆ ಕ್ರಾಂತಿ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು ಚಿತ್ರೀಕರಣ ಜಾರಿಯಲ್ಲಿದೆ. ಬರೋಬ್ಬರಿ ಎಂಟು ವರ್ಷಗಳ ನಂತರ ಈ ಚಿತ್ರದ ಮೂಲಕ ಡಿ-ಬಾಸ್ ಜೊತೆ ಅವರು ನಟಿಸುತ್ತಿದ್ದಾರೆ.
ಇನ್ನು ಸೋಶಿಯಲ್ ಮೀಡಿಯಾದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ರವರ ಡ್ಯಾನ್ಸ್ ವಿಡಿಯೋ ಒಂದು ದೊಡ್ಡ ಮಟ್ಟದಲ್ಲಿ ವೈರಲ್ ಆಗುತ್ತಿದ್ದು ಸಾವಿರಾರು ವೀಕ್ಷಣೆಗಳನ್ನು ಪಡೆಯುವ ಮೂಲಕ ಸದ್ದು ಮಾಡುತ್ತಿದೆ. ಈ ವಿಡಿಯೋದಲ್ಲಿ ಯಾವುದೋ ಕಾರ್ಯಕ್ರಮದ ವೇದಿಕೆಯಲ್ಲಿ ಸಂಗೀತ ನಿರ್ದೇಶಕ ರಘು ದೀಕ್ಷಿತ್ ರವರ ಜೊತೆಗೆ ರಚಿತರಾಮ್ ರವರು ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಇದಾಗಿದ್ದು ನೀವು ಕೂಡ ಈ ವಿಡಿಯೋವನ್ನು ನೋಡಬಹುದಾಗಿದೆ. ಈ ವಿಡಿಯೋದ ಕುರಿತಂತೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ ತಿಳಿಸಿ.