ಏಕದಿನ ಟಿ 20 ಕ್ರಿಕೆಟ್ ನಲ್ಲಿ ಭಾರತ ಅತಿ ಮೌಲ್ಯಯುತ ಆಟಗಾರನನ್ನು ಹೆಸರಿಸಿದ ಆಕಾಶ್ ಚೋಪ್ರಾ: ಇವರು ಯಾವ ಕ್ರಿಕೆಟ್ ಪಂಡಿತ ಎಂದ ಜನರು

13

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಸದ್ಯಕ್ಕೆ ಭಾರತೀಯ ಕ್ರಿಕೆಟ್ ತಂಡ ಈ ಬಾರಿ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ನಡೆಯಲಿರುವ ಟಿ-20ವಿಶ್ವಕಪ್ ಗಾಗಿ ತಯಾರಿಯನ್ನು ನಡೆಸಿಕೊಳ್ಳುತ್ತಿದೆ. ಇದಕ್ಕೆ ಪ್ರಮುಖ ಕಾರಣ ಎಂದರೆ ಕಳೆದ ಬಾರಿಯ ಟಿ20 ವಿಶ್ವಕಪ್ ನಲ್ಲಿ ಭಾರತೀಯ ಕ್ರಿಕೆಟ್ ತಂಡ ಸಂಪೂರ್ಣವಾಗಿ ವಿಫಲವಾಗಿತ್ತು. ಇದು ಭಾರತೀಯ ಕ್ರಿಕೆಟ್ ತಂಡದ ಇತಿಹಾಸದಲ್ಲಿ ಅತ್ಯಂತ ಕಳಪೆ ಪ್ರದರ್ಶನ ಎಂಬುದಾಗಿ ಎಲ್ಲರೂ ಮಾತನಾಡಿಕೊಂಡಿದ್ದರು. ಅದಕ್ಕೆ ಸರಿಯಾಗಿ ತಯಾರಿಯನ್ನು ನಡೆಸಿಕೊಂಡಿರುವ ಭಾರತೀಯ ಕ್ರಿಕೆಟ್ ತಂಡ ಈ ಬಾರಿ ಆಡಿರುವ ಎಲ್ಲಾ ವೈಟ್ ಬಾಲ್ ಸರಣಿಯಲ್ಲಿ ಗೆಲುವನ್ನು ಸಾಧಿಸಿದೆ ಎಂದು ಹೇಳಬಹುದಾಗಿದೆ.

ಅದರಲ್ಲೂ ಬಲಿಷ್ಠ ಇಂಗ್ಲೆಂಡ್ ತಂಡದ ವಿರುದ್ಧ ಏಕದಿನ ಹಾಗೂ ಟಿಪ್ಪಣಿಯಲ್ಲಿ ಅವರ ತವರು ನೆಲದಲ್ಲಿಯೇ ಭಾರತೀಯ ಕ್ರಿಕೆಟ್ ತಂಡ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಹಿನ್ನೆಲೆಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಹಾಲಿ ಕಾಮೆಂಟೇಟರ್ ಆಗಿರುವ ಆಕಾಶ್ ಚೋಪ್ರಾ ರವರು ಹೀಗೊಬ್ಬ ಆಟಗಾರ ವೈಟ್ ಬಾಲ್ ಕ್ರಿಕೆಟ್ನಲ್ಲಿ ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಮೌಲ್ಯಯುತ ಆಟಗಾರ ಎಂಬುದಾಗಿ ಹೇಳಿಕೆ ನೀಡಿದ್ದಾರೆ. ಅಷ್ಟಕ್ಕೂ ಅದು ಯಾರು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಹೌದು ಗೆಳೆಯರೆ ಕಾಮೆಂಟೇಟರ್ ಆಕಾಶ್ ಚೋಪ್ರಾ ರವರು ನಿಯಮಿತ ಓವರ್ಗಳ ವಿಭಾಗದಲ್ಲಿ ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಪ್ರಮುಖ ಆಟಗಾರನಾಗಿ ಹಾರ್ದಿಕ್ ಪಾಂಡ್ಯ ರವರು ಗುರುತಿಸಿಕೊಂಡಿದ್ದಾರೆ ಎಂಬುದಾಗಿ ಹೇಳಿದ್ದಾರೆ. ಟಿ-20ವಿಶ್ವಕಪ್ ನಂತರ ಇಂಜುರಿ ಇಂದ ತಂಡದಿಂದ ಹೊರ ಹೋಗಿದ್ದ ಹಾರ್ದಿಕ್ ಪಾಂಡ್ಯ ಐಪಿಎಲ್ ನಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕನಾಗಿ ವಾಪಸಾಗಿ ಚೊಚ್ಚಲ ಐಪಿಎಲ್ ನಲ್ಲಿ ಕಪ್ಪನ್ನು ಗೆಲ್ಲುತ್ತಾರೆ. ನಂತರ ಹಾಡಿರುವ ಬಹುತೇಕ ಎಲ್ಲಾ ಸರಣಿಗಳಲ್ಲಿ ಕೂಡ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡು ವಿಭಾಗದಲ್ಲಿ ಮ್ಯಾಚ್ ವಿನ್ನಿಂಗ್ ಪರ್ಫಾರ್ಮೆನ್ಸ್ ನೀಡಿದ್ದಾರೆ ಎಂಬುದಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂದಿನ ವಿಶ್ವಕಪ್ ದೃಷ್ಟಿಯಲ್ಲಿ ವೈಟ್ ಬಾಲ ಕ್ರಿಕೆಟ್ನಲ್ಲಿ ಹಾರ್ದಿಕ್ ಪಾಂಡ್ಯ ಅತ್ಯಂತ ನಂಬಿಗಸ್ತ ಕ್ರಿಕೆಟಿಗ ಎಂಬುದಾಗಿ ಹೇಳಿದ್ದಾರೆ.