ಬಿಗ್ ನ್ಯೂಸ್: ಈ ಬಾರಿಯ ಬಿಗ್ ಬಾಸ್ ಪ್ರಾರಂಭದ ಅದ್ದೂರಿ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬರುತ್ತಿರುವ ಅಪ್ಸರೆಯಂತಹ ನಟಿ ಯಾರು ಗೊತ್ತೇ?

28

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಲರ್ಸ್ ಕನ್ನಡ ವಾಹಿನಿಯಿಂದ ಅಧಿಕೃತವಾಗಿ ಬಂದಿರುವ ಘೋಷಣೆಯ ಪ್ರಕಾರ ಈ ಬಾರಿ ಬಿಗ್ ಬಾಸ್ ಇತಿಹಾಸದಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ವೂಟ್ ನಲ್ಲಿ ಬಿಗ್ ಬಾಸ್ ಓಟಿಟಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಅದು ಕೂಡ ಇದೇ ಆಗಸ್ಟ್ 6 ರಿಂದ ಪ್ರಾರಂಭವಾಗಲಿದೆ ಎಂಬುದಾಗಿ ಈಗಾಗಲೇ ಪ್ರೊಮೋ ಗಳು ವಾಹಿನಿಯಲ್ಲಿ ಓಡಾಡುತ್ತಿದೆ.

ಇದಕ್ಕೂ ಕೂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರವರೇ ನಿರುಪಕರಾಗಿ ಕಾಣಿಸಿಕೊಳ್ಳಲಿದ್ದು ಈ ಕಾರ್ಯಕ್ರಮ 24 ಗಂಟೆ ವೂಟ್ ಅಪ್ಲಿಕೇಶನ್ ನಲ್ಲಿ ಪ್ರಸಾರ ಕಾಣಲಿದೆ ಎಂಬುದಾಗಿ ಕೂಡ ತಿಳಿದು ಬಂದಿದ್ದು ಇದು ಬಿಗ್ ಬಾಸ್ ಇತಿಹಾಸದಲ್ಲಿ ಹೊಸ ಪ್ರಯೋಗವಾಗಿದೆ ಎಂದು ಹೇಳಬಹುದಾಗಿದೆ. ಕೇಳಿ ಬರುತ್ತಿರುವ ಸುದ್ದಿ ಪ್ರಕಾರ ಈ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ ಗಳು ಹೆಚ್ಚಾಗಿ ಭಾಗವಹಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಇದರಲ್ಲಿ ಚೆನ್ನಾಗಿ ಪ್ರದರ್ಶನವನ್ನು ನೀಡುವ ಹಾಗೂ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗುವ ಕೆಲವು ಅಭ್ಯರ್ಥಿಗಳನ್ನು ಮುಖ್ಯ ಬಿಗ್ ಬಾಸ್ ಗೆ ಆಯ್ಕೆ ಮಾಡಲಾಗುತ್ತದೆ ಎಂಬುದಾಗಿ ತಿಳಿದು ಬಂದಿದೆ. ಇದು ಎಷ್ಟರ ಮಟ್ಟಿಗೆ ನಿಜ ಎಂಬುದನ್ನು ಮುಂದಿನ ದಿನಗಳಲ್ಲಿಯೇ ನಾವು ಕಾದು ನೋಡಬೇಕಾಗುತ್ತದೆ. ಇನ್ನು ಈ ಕಾರ್ಯಕ್ರಮದ ಉದ್ಘಾಟನೆಗೆ ಅತಿಥಿಯಾಗಿ ಬರುತ್ತಿರುವ ಸೆಲೆಬ್ರಿಟಿ ಯಾರು ಎಂಬುದು ತಿಳಿದು ಬಂದಿದ್ದು ನಿಜಕ್ಕೂ ಸರ್ಪ್ರೈಸಿಂಗ್ ಸೆಲೆಬ್ರಿಟಿ ಅತಿಥಿಯಾಗಿ ಬರುತ್ತಿದ್ದಾರೆ ಎಂದು ಹೇಳಬಹುದಾಗಿದೆ. ಹೌದು ಗೆಳೆಯರೇ ಕನ್ನಡ ಚಿತ್ರರಂಗದ ಸ್ಟಾರ್ ನಟಿಯರಲ್ಲಿ ಒಬ್ಬರಾಗಿರುವ ರಾಧಿಕಾ ರವರು ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ.