ಬಾರಿ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾ ನೋಡಿ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಹೇಳಿದ್ದೇನು ಗೊತ್ತೇ??

4,142

ನಮಸ್ಕಾರ ಸ್ನೇಹಿತರೇ ರಿಷಬ್ ಶೆಟ್ಟಿ ಶೆಟ್ಟಿ ನಾಯಕನಟನಾಗಿ ಹಾಗೂ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಈಗಾಗಲೇ ಬಿಡುಗಡೆಯಾಗಿ ದೇಶ ವಿದೇಶಗಳಲ್ಲಿ ಪ್ರೇಕ್ಷಕರ ಮನಸೆಳೆಯುವಲ್ಲಿ ಯಶಸ್ವಿಯಾಗಿದೆ. ನಿಜಕ್ಕೂ ಕೂಡ ಕನ್ನಡ ಮಣ್ಣಿನ ಸ್ವಂತಿಕೆಯನ್ನು ಹೊಂದಿರುವ ಈ ಕಥೆ ಪ್ರತಿಯೊಬ್ಬ ಪ್ರೇಕ್ಷಕರಿಗೂ ಕೂಡ ಇಷ್ಟ ಆಗಿದೆ. ಕೇವಲ ಪ್ರೇಕ್ಷಕರು ಮಾತ್ರವಲ್ಲದೆ ಖ್ಯಾತ ಸೆಲೆಬ್ರಿಟಿಗಳು ಕೂಡ ಕಾಂತರಾ ಸಿನಿಮಾವನ್ನು ವೀಕ್ಷಿಸಿ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಅದರಲ್ಲಿಯೂ ವಿಶೇಷವಾಗಿ ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಸಲಾರ್ ಸಿನಿಮಾದ ನಾಯಕ ನಟ ಆಗಿರುವ ರೆಬೆಲ್ ಸ್ಟಾರ್ ಪ್ರಭಾಸ್ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಕಾಂತಾರ ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಅಷ್ಟಕ್ಕೂ ರೆಬೆಲ್ ಸ್ಟಾರ್ ಪ್ರಭಾಸ್ ಹಾಗೂ ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ನಮ್ಮ ಕನ್ನಡದ ಹೆಮ್ಮೆಯ ಕಾಂತಾರ ಸಿನಿಮಾದ ಬಗ್ಗೆ ಹೇಳಿದ್ದೇನು ಗೊತ್ತಾ, ತಿಳಿದುಕೊಳ್ಳೋಣ ಬನ್ನಿ. ಮೊದಲಿಗೆ ರೆಬೆಲ್ ಸ್ಟಾರ್ ಪ್ರಭಾಸ್ ರವರು ಸಿನಿಮಾವನ್ನು ವೀಕ್ಷಿಸಿದ ನಂತರ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ, ಚಿತ್ರವನ್ನು ನೋಡುವಾಗ ಸಂಪೂರ್ಣವಾಗಿ ಎಂಜಾಯ್ ಮಾಡಿದ್ದು ಅದರಲ್ಲೂ ವಿಶೇಷವಾಗಿ ಕ್ಲೈಮ್ಯಾಕ್ಸ್ ದೃಶ್ಯಗಳು ನಿಜಕ್ಕೂ ಕೂಡ ನನ್ನ ಮನಸ್ಸನ್ನು ಗೆದ್ದಿದೆ..

ಎಂಬುದಾಗಿ ಕಾಂತಾರ ಸಿನಿಮಾದ ಬಗ್ಗೆ ರೆಬೆಲ್ ಸ್ಟಾರ್ ಪ್ರಭಾಸ್ ರವರು ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇನ್ನು ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ಅವರು ಕಾಂತಾರ ಸಿನಿಮಾವನ್ನು ವೀಕ್ಷಿಸಿದ ನಂತರ ಸಿನಿಮಾವನ್ನು ಕ್ಲಾಸಿಕ್ ಸಿನಿಮಾ ಎನ್ನುವುದಾಗಿ ಮನಸಾರೆ ಹೊಗಳಿದ್ದಾರೆ. ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಂಸ್ ತಂಡವನ್ನು ಕೂಡ ಈ ಸಂದರ್ಭದಲ್ಲಿ ಪ್ರಶಾಂತ್ ನೀಲ್ ಅಭಿನಂದಿಸಿದ್ದಾರೆ. ಕಾಂತಾರ ಸಿನಿಮಾ ಈಗಾಗಲೇ ಬಾಕ್ಸ್ ಆಫೀಸ್ ಕಲೆಕ್ಷನ್ ವಿಚಾರದಲ್ಲಿ ಕೂಡ ಬೇರೆ ಎಲ್ಲಾ ಸಿನಿಮಾಗಳಿಗಿಂತ ಮುಂದಿರುವುದು ನಿಜಕ್ಕೂ ಕೂಡ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಸಾಕ್ಷಿಯಾಗಿದೆ. ಕಾಂತಾರ ಸಿನಿಮಾದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ತಿಳಿಸಿ.