ಕಾಂತಾರ ಗೆದ್ದ ಖುಷಿಯಲ್ಲಿ ಮಗಳ ಮುದ್ದಾದ ಫೋಟೋ ಶೇರ್ ಮಾಡಿದ ರಿಷಬ್: ಮಗಳಿಗೆ ಏನೆಂದು ಹೆಸರಿಟ್ಟಿದ್ದಾರೆ ಗೊತ್ತೇ??
ನಮಸ್ಕಾರ ಸ್ನೇಹಿತರೇ ರಿಷಬ್ ಶೆಟ್ಟಿ ನಾಯಕನಾಗಿ ಹಾಗೂ ನಿರ್ದೇಶಕನಾಗಿ ಕಾಣಿಸಿಕೊಂಡಿರುವ ಕಾಂತಾರ ಸಿನಿಮಾ ಈಗಾಗಲೇ ಕರ್ನಾಟಕ ರಾಜ್ಯದ್ಯಂತ ಹೌಸ್ ಫುಲ್ ಪ್ರದರ್ಶನಗಳನ್ನು ಕಾಣುವ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಕೂಡ ದಾಖಲೆಯ ಮಟ್ಟದ ಕಲೆಕ್ಷನ್ ಮಾಡಿದೆ.
ಕರಾವಳಿ ಸಂಸ್ಕೃತಿಯನ್ನು ನಾಡಿನಾದ್ಯಂತ ಪ್ರತಿಯೊಬ್ಬ ಪ್ರೇಕ್ಷಕರಿಗೂ ಕೂಡ ಸಾರುವ ಅಂತಹ ಇಂತಹ ಸಿನಿಮಾಗಳು ಇನ್ನಷ್ಟು ಕನ್ನಡ ಚಿತ್ರರಂಗದಲ್ಲಿ ಬರಬೇಕು ಎನ್ನುವುದಾಗಿ ಪ್ರೇಕ್ಷಕರು ಬೇಡಿಕೆ ಇಟ್ಟಿದ್ದಾರೆ. ಕಾಂತಾರ ಸಿನಿಮಾ ಎನ್ನುವುದು ನಮ್ಮ ಕನ್ನಡ ಚಿತ್ರರಂಗದಲ್ಲಿ ಪಾತ್ ಬ್ರೇಕಿಂಗ್ ಸಿನಿಮಾ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಕೇವಲ ಕನ್ನಡದಲ್ಲಿ ಮಾತ್ರ ಬಿಡುಗಡೆಯಾಗಿದ್ದ ಕಾಂತಾರ ಈಗ ಹಿಂದಿಯಲ್ಲಿ ಕೂಡ ಬಿಡುಗಡೆಯಾಗುವುದಕ್ಕೆ ಸಜ್ಜಾಗಿ ನಿಂತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಭಾಷೆಗಳಲ್ಲಿ ಕಾಂತಾರ ಬಿಡುಗಡೆಯಾದರೆ ಕೂಡ ಅಚ್ಚರಿ ಪಡಬೇಕಾದ ಯಾವುದೇ ಅಗತ್ಯವಿಲ್ಲ. ಇನ್ನು ಸಾಮಾನ್ಯವಾಗಿ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಇಬ್ಬರು ಆಗಾಗ ತಮ್ಮ ಮಗ ರಣವಿತ್ ಶೆಟ್ಟಿ ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತಾರೆ. ಆದರೆ ವಿಜಯದಶಮಿಯ ಶುಭದಿನದ ಅಂಗವಾಗಿ ಮೊದಲ ಬಾರಿಗೆ ತಮ್ಮ ಮಗಳ ಫೋಟೋ ಜೊತೆಗೆ ಆಕೆಯ ಹೆಸರನ್ನು ಕೂಡ ಬಹಿರಂಗಪಡಿಸಿದ್ದಾರೆ.

ಮಿತ್ರರೇ ನಿಮಗೆ ನೆನಪಿರಬಹುದು ಮಾರ್ಚ್ ತಿಂಗಳ ಸಂದರ್ಭದಲ್ಲಿ ರಿಷಬ್ ಶೆಟ್ಟಿ ತಮ್ಮ ಮಗಳು ಜನಿಸಿರುವ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಅಧಿಕೃತವಾಗಿ ಖಾತ್ರಿಪಡಿಸಿದ್ದರು. ಸದ್ಯಕ್ಕೆ ಮಗಳಿಗೆ ಏಳು ತಿಂಗಳ ತುಂಬಿದೆ. ಇನ್ನು ಮಗಳ ಹೆಸರು ರಾಧ್ಯ ಎನ್ನುವುದಾಗಿ ಇಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ವಿಜಯದಶಮಿಯ ಶುಭ ಸಂದರ್ಭದಲ್ಲಿ ಮಗಳ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ದಸರಾ ಹಬ್ಬದ ಶುಭಾಶಯಗಳು ಕೋರಿದ್ದು ಫೋಟೋ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ವೈರಲ್ ಆಗಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ.