ಕಾಂತಾರ ಸಿನಿಮಾ ಬಗ್ಗೆ ಮಾತನಾಡಿದ್ದ ಚೇತನ್ ಗೆ ಬಿಗ್ ಶಾಕ್: ಇರಲಾರದೆ ಇರುವೆ ಬಿಟ್ಟುಕೊಂಡ ನಂತರ ಏನಾಗಿದೆ ಗೊತ್ತೆ??

184

ಆ ದಿನಗಳು, ಮೈನಾ ಚಿತ್ರದ ಖ್ಯಾತಿಯ ನಟ ಚೇತನ್ ಕುಮಾರ್ ಸದಾ ಒಂದಿಲ್ಲೊಂದು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಇದೀಗ ಅವರು ದೊಡ್ಡ ಮಟ್ಟದ ಸಕ್ಸಸ್ ಕಾಣುತ್ತಿರುವ ಕಾಂತಾರದ ಚಿತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ವಿವಾದ ಸೃಷ್ಟಿಸಿಕೊಂಡಿರುವುದು ಎಲ್ಲರಿಗೂ ತಿಳಿದ ಸಂಗತಿಯೇ ಆಗಿದೆ. ಚಿತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಅವರ ಜಾಲತಾಣ ಖಾತೆಯಲ್ಲಿ ಬರೆದುಕೊಂಡಿದ್ದು ಸಾಕಷ್ಟು ಜನರ ಕೆಂಗಣ್ಣಿಗೆ ಗುರಿಯಾಗಿತ್ತು. ಭೂತರಾದನೆ, ಕೋಲ ಇವೆಲ್ಲವೂ ಹಿಂದೂ ಸಂಸ್ಕೃತಿಯೇ ಅಲ್ಲ. ಹಿಂದೂ ಧರ್ಮಕ್ಕೂ ಮೊದಲಿನಿಂದಲೂ ಈ ಆಚರಣೆಗಳಿವೆ ಎಂದು ಅವರು ಹೇಳಿದ್ದರು. ಇದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಚೇತನ್ ಹೇಳಿಕೆ ಪರವಾಗಿ ಕೆಲವರು ನಿಂತರೆ ಅವರ ವಿರುದ್ಧ ಅನೇಕರು ಹರಿಹಾಯ್ದರು. ಸೋಶಿಯಲ್ ಮೀಡಿಯಾದಲ್ಲಿ ಚೇತನ್ ಪರ ಹಾಗೂ ವಿರೋಧದ ಚರ್ಚೆಗಳು ನಡೆಯುತ್ತಿವೆ. ಇದೀಗ ಚೇತನ್ ಹೀಗೆ ಹೇಳಿಕೆ ಕೊಟ್ಟು ಮತ್ತೊಂದು ಸಮಸ್ಯೆಯನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಹೌದು! ದೈವರಾಧನೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಚೇತನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ಕೇಸ್ ದಾಖಲಿಸಲಾಗಿದೆ. ಹಿಂದುಗಳ ನಂಬಿಕೆ, ಭಾವನೆಗಳಿಗೆ ಅವಹೇಳನ ಮಾಡಿ ಧಕ್ಕೆ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್, ರಿಷಬ್ ಶೆಟ್ಟಿ ಕಾಂತಾರ ಚಿತ್ರದ ಕುರಿತು ನೀಡಿದ್ದ ಹೇಳಿಕೆಯನ್ನು ಆಧರಿಸಿ ಒಂದು ವಿವಾದಾತ್ಮಕ ಹೇಳಿಕೆ ಬರೆದುಕೊಂಡಿದ್ದರು. ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ, ಅದು ಬುಡಕಟ್ಟು ಜನಾಂಗದ ಸಂಸ್ಕೃತಿ. ಆದರೆ ರಿಷಬ್ ಶೆಟ್ಟಿ ಇದನ್ನು ಹಿಂದೂ ಸಂಸ್ಕೃತಿ ಎಂದು ಹೇಳುತ್ತಿದ್ದಾರೆ ಎನ್ನುವ ಮೂಲಕ ವಿವಾದಕ್ಕೆ ಕಾರಣರಾಗಿದ್ದರು.

ಇದರಿಂದಾಗಿ ಚೇತನ್ ಜಾತಿ ಜಾತಿಗಳ ನಡುವೆ ದ್ವೇಷದ ವಿಷ ಬೀಜ ಬಿತ್ತುವ ದುಷ್ಕೃತ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ದೂರು ದಾಖಲಾಗಿರುವ ಕುರಿತು ನಟ ಚೇತನ್ಗೆ ನೋಟಿಸ್ ನೀಡಲಾಗಿದ್ದು, ವಿಚಾರಣೆ ನಡೆಯಲಿದೆ. ಇನ್ನು ರಿಷಬ್ ಶೆಟ್ಟಿ ಸ್ವತ ನಿರ್ದೇಶಿಸಿ, ನಟಿಸಿರುವ ಪ್ಯಾನ್ ಇಂಡಿಯಾ ಚಿತ್ರ ಕಾಂತಾರ ದೊಡ್ಡ ಮಟ್ಟದ ಗಳಿಕೆ ಮಾಡುತ್ತಿದೆ. ಬಿಡುಗಡೆಗೊಂಡ ಅಷ್ಟು ಭಾಷೆಗಳಲ್ಲೂ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಈಗಾಗಲೇ ಕಾಂತಾರ ಗಳಿಕೆಯಲ್ಲಿ ದಾಖಲೆ ಸೃಷ್ಟಿಸಿದೆ. 100 ಕೋಟಿ ಕ್ಲಬ್ ಸೇರಿರುವ ಕಾಂತಾರ 200 ಕೋಟಿ ಗಳಿಕೆ ಕಡೆಗೆ ಮುನ್ನುಗ್ಗುತ್ತಿದ್ದು, ಚಿತ್ರವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ.